ಅಕ್ಟೋಬರ್ 2 ರಂದು ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ : ಯಶ್ಪಾಲ್ ಸುವರ್ಣ -Vishwanews24
ಅಕ್ಟೋಬರ್ 2 ರಂದು ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ : ಯಶ್ಪಾಲ್ ಸುವರ್ಣ -Vishwanews24
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಟೀಮ್ ನೇಶನ್ ಫಸ್ಟ್ ಸಹಯೋಗದೊಂದಿಗೆ ಅಕ್ಟೋಬರ್ ೨ ರಂದು ಗಾಂಧಿ ಜಯಂತಿಯ ಅಂಗವಾಗಿ ಮಲ್ಪೆ ಪಡುಕರೆ ಶಾಂತಿನಗರದಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಆಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಬೆಳಿಗ್ಗೆ ೮.೩೦ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಟೀಮ್ ನೇಶನ್ ಫಸ್ಟ್ ಅಧ್ಯಕ್ಷರಾದ ಸೂರಜ್ ಕಿದಿಯೂರು ಹಾಗೂ ಬ್ಯಾಂಕಿನ ನಿದೇರ್ಶಕರು ಭಾಗವಹಿಸಲಿದ್ದು, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಟೀಮ್ ನೇಶನ್ ಫಸ್ಟ್ ತಂಡದೊ0ದಿಗೆ ೨೦೦ ಮಂದಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
