ಅಕ್ರಮ ಹಣ ಸಾಗಾಟ ಆರೋಪ : ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ – vishwanews24

Featured, ರಾಜ್ಯ ನ್ಯೂಸ್

ಅಕ್ರಮ ಹಣ ಸಾಗಾಟ ಆರೋಪ : ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ

ಬೆಂಗಳೂರು :ಸಚಿವ ಜಮೀರ್‌ ಅಹ್ಮದ್‌ ಖಾನ್‌ ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು.

ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ – vishwanews24

ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್‌ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರಕ್ಕೆ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ

Leave a Reply