ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ..
ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ..
ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ..
ಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.
ಇಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.
