ಅತ್ಯಾಚಾರ ಪ್ರಕರಣ :ಚಿನ್ಮಯಾನಂದ ಸ್ವಾಮಿ ವಿರುದ್ದ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬಂಧನ -Vishwanews24

Featured, ರಾಷ್ಟ್ರ ನ್ಯೂಸ್

ಲಕ್ನೋ: ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಆರೋಪದ ಮೂಲಕ ಕಾನೂನು ವಿದ್ಯಾರ್ಥಿನಿ ತನ್ನ ಸ್ನೇಹಿತರ ಜತೆ ಸೇರಿ ಚಿನ್ಮಯಾನಂದ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದಾರೆಂಬ ಆರೋಪದ ಮೇಲೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆಂದು ಹೇಳಲಾಗುತ್ತಿದೆ.

ಬುಧವಾರ ಬೆಳಗ್ಗೆ 23 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ಎಂದು ತಿಳಿದುಬಂದಿದೆ.

ಮನೆಯಿಂದ ಆಕೆಯ ಬಂಧಿಸಿದ ಎಸ್‍ಐಟಿ ಪೊಲೀಸರು, ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ ನಂತರ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು.