ಅತ್ಯಾಚಾರ  ಪ್ರಕರಣ : ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ  – vishwanews24

Featured, ರಾಜ್ಯ ನ್ಯೂಸ್

ಅತ್ಯಾಚಾರ  ಪ್ರಕರಣ : ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ 

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ಇರುವಂತೆ ಆಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ಮಾಡಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್​ ಅವರು ಈ ಆದೇಶ ಹೊರಡಿಸಿದ್ದಾರೆ.

ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ – vishwanews24

Leave a Reply