ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ : ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ – Vishwanews24
ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ : ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ
ಶಿಡ್ಲಘಟ್ಟ: ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆಗಳನ್ನು ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಸಂಭವಿಸಿದೆ.
ಶ್ರೀರಾಮಪ್ಪ,(69) ಸರೋಜ,(55) ಹಾಗೂ ಮನೋಜ್(25) ಆತ್ಮಹತ್ಯೆಗೆ ಶರಣಾಗಿರುವವರು.
ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24
ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಜೊತೆ ಮಗಳು ಅರ್ಚನಾ ಹೊರಟು ಹೋಗಿದ್ದಾಳೆ. ಇದರಿಂದ ಮನನೊಂದು ತಮ್ಮ ಸಾವಿಗೆ ಮಗಳು ಕಾರಣವೆಂದು ಡೆತ್ ನೋಟ್ ಬರೆದು ತಂದೆ ಶ್ರೀರಾಮಪ್ಪ, ತಾಯಿ ಸರೋಜಾ ಹಾಗೂ ಸಹೋದರ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ,ಸಿಪಿಐ ನಂದನ್ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಸತೀಶ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಕಳುಹಿಸಿದ್ದಾರೆ.

