ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24
ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.
ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ.2 ರಂದು ಸಾವನ್ನಪ್ಪಿದ್ದರು.
ಇದನ್ನೂ ಓದಿ:
ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24
ಮಗನ ಸಾವಿನ ಬಳಿಕ ಪೋಷಕರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
