ಅಪಪ್ರಚಾರ, ಹಣಬಲದ ಮುಂದೆ ನಮ್ಮ ಪ್ರಾಮಾಣಿಕ ಜನಸೇವೆ ಮಂಕಾಗಿ ಹೋಯಿತು : ವಿನಯ್ ಕುಮಾರ್ ಸೊರಕೆ – VIshwanews24
ಪಕ್ಷದ ಕಾರ್ಯಕರ್ತರ ಜೊತೆಗೆ ನನಗಿರುವ ಅವಿನಾಭಾವ ಸಂಬಂಧವನ್ನು ನಾನು ಯಾವತ್ತಿಗೂ ಕಡಿದುಕೊಳ್ಳುವುದಿಲ್ಲ..
ಕಾರ್ಯಕರ್ತರ ಪ್ರೀತಿ-ಅಭಿಮಾನವೇ ನಾನು ರಾಜಕೀಯದಲ್ಲಿ ಸಂಪಾದಿಸಿರುವ ಬಹುದೊಡ್ಡ ಆಸ್ತಿ..
ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಪಕ್ಷ ಬಲವರ್ಧನೆಗೆ ಪಣ ತೊಡೋಣ..
ಕಾಪು: ಸೋಲು-ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ. ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರೆ ನೀಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಕಛೇರಿ ‘ರಾಜೀವ್ ಭವನ’ದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರಿಗೆ, ಮತದಾರರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತೆ ಅರ್ಪಣಾ ಸಭೆಯಲ್ಲಿ ಅವರು ಮಾತನಾಡಿದರು.
‘ಚುನಾವಣಾ ಕಾರ್ಯದಲ್ಲಿ ಪಕ್ಷದ ಕಾರ್ಯಕರ್ತರು ನಿಷ್ಠೆ, ಅಭಿಮಾನದಿಂದ ಅವಿರತ ಶ್ರಮವಹಿಸಿದ್ದಾರೆ. ಆದರೆ ಮತದಾರರ ಮನ ಮುಟ್ಟುವಲ್ಲಿ ಯಶಸ್ಸು ಕಾಣಲು ವಿಫಲವಾಗಿದ್ದು, ಪ್ರತಿಸ್ಪರ್ಧಿ ಅಭ್ಯರ್ಥಿಗಳಿಂದ ನಡೆದ ವ್ಯವಸ್ಥಿತ ಅಪಪ್ರಚಾರ, ಹಣಬಲದ ಮುಂದೆ ನಮ್ಮ ಪ್ರಾಮಾಣಿಕ ಜನಸೇವೆ ಮಂಕಾಗಿ ಹೋಯಿತು’ ಎಂದರು.
ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು – Vishwanews24
‘ಕಾಪು ಕ್ಷೇತ್ರದಲ್ಲಿ ನಮಗೆ ಸೋಲಾಗಿರಬಹುದು, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಮುಂದೆ ಸಾಗೋಣ. ಸರ್ಕಾರದ ಸವಲತ್ತು, ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸೋಣ. ಆ ಮೂಲಕ ಮುಂಬರಲಿರುವ ತಾಲೂಕು, ಜಿಲ್ಲಾ ಪಂಚಾಯಿತಿ, 2024ರ ಲೋಕಸಭಾ ಚುನಾವಣೆಗೆ ಸಜ್ಜಾಗೋಣ’ ಎಂದು ಕರೆ ನೀಡಿದರು.
ವೈತಿರಿಕ್ತ ಫಲಿತಾಂಶದಿಂದ ಆಘಾತ ಕರ್ನಾಟಕ ರಾಜ್ಯದಲ್ಲಿ ಜನರು ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ ಪಕ್ಷವನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದರೆ ಕರಾವಳಿ ಭಾಗದಲ್ಲಿ ಅದಕ್ಕೆ ವ್ಯತಿರಿಕ್ತವಾದ ಫಲಿತಾಂಶ ಬಂದಿರುವುದು ಅಚ್ಚರಿ ಆಘಾತಕಾರಿಯಾಗಿದೆ. ಕಾರ್ಯಕರ್ತರು ಸೋಲಾಯಿತೆಂದು ವಿಚಲಿತರಾಗದೆ ಎದೆಗುಂದಬೇಡಿ. ಈ ಹಿಂದೆ ಯಾವ ರೀತಿಯಲ್ಲಿ ನಿಮಗೆ ಸಹಕರಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬೆಂಬಲಿಸುತ್ತಿದ್ದೇನೋ ಅದಕ್ಕಿಂತಲೂ ಒಂದು ಪಟ್ಟು ಹೆಚ್ಚಾಗಿ ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ವಿನಯ್ ಕುಮಾರ್ ಸೊರಕೆ ಅಭಯ ನೀಡಿದರು.
‘ನಿಮ್ಮ ಸಹಕಾರ ನನ್ನ ಮೇಲೆ ನೀವು ಇಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರಋಣಿ. ಪಕ್ಷದ ಕಾರ್ಯಕರ್ತರ ಜೊತೆಗೆ ನನಗಿರುವ ಅವಿನಾಭಾವ ಸಂಬಂಧವನ್ನು ನಾನು ಯಾವತ್ತಿಗೂ ಕಡಿದುಕೊಳ್ಳುವುದಿಲ್ಲ. ಕಾರ್ಯಕರ್ತರ ಪ್ರೀತಿ-ಅಭಿಮಾನವೇ ನಾನು ರಾಜಕೀಯದಲ್ಲಿ ಸಂಪಾದಿಸಿರುವ ಬಹುದೊಡ್ಡ ಆಸ್ತಿ ಎಂದು ಸೊರಕೆ ಭಾವುಕರಾಗಿ ನುಡಿದರು. ನೆರೆದಿದ್ದ ಕಾರ್ಯಕರ್ತರು ಸಹ ಭಾವುಕರಾದರು.
ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು – Vishwanews24
ರಾಜ್ಯ ಹಿಂದುಳಿದ ವರ್ಗ ಘಟಕಗಳ ಸಮಿತಿ ಕಾರ್ಯದರ್ಶಿ ಶಿವಾಜಿ ಸುವರ್ಣ ಬೆಳ್ಳೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ಬಲ್ಲಾಳ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಕ್ರಂ ಕಾಪು, ಜಿಲ್ಲಾ ಕಾಂಗ್ರೆಸ್ ಅನಿವಾಸಿ ಭಾರತೀಯ ಸಮಿತಿ ಕಾರ್ಯದರ್ಶಿ ವಹಿದ್ ಶೇಖ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಫುರ್ಟಾಡೋ, ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ದೀಪಕ್ ಎರ್ಮಾಳ್, ಮೊಹಮ್ಮದ್ ಸಾದಿಕ್, ಪ್ರಶಾಂತ್ ಜತ್ತನ್ನ, ಸರಸು ಡಿ. ಬಂಗೇರ, ಪ್ರಭಾ ಬಿ. ಶೆಟ್ಟಿ, ವೈ. ಸುಧೀರ್, ಹಸನಬ್ಬ ಶೇಖ್, ರತನ್ ಶೆಟ್ಟಿ, ಕಿಶೋರ್ ಅಂಬಾಡಿ, ಇಂದಿರಾ ಆಚಾರ್ಯ, ಸಿಮ್ಮಿ ಡಿಸೋಜ, ಯು.ಸಿ.ಶೇಕಬ್ಬ, ಆಶಾ ಅಂಚನ್ ಕಟಪಾಡಿ, ಸುನಿಲ್ ಡಿ. ಬಂಗೇರ, ಎಚ್. ಅಬ್ದುಲ್ಲಾ, ಅಬ್ದುಲ್ ಹಮೀದ್ ಮೂಳೂರು, ದಿವಾಕರ್ ಡಿ. ಶೆಟ್ಟಿ, ರಾಜೇಶ್ ಕುಲಾಲ್, ಫರ್ಜಾನ ಸಂಜಯ್, ಶೋಭಾ ಬಂಗೇರ, ರಾಧಿಕಾ ಸುವರ್ಣ, ವಿದ್ಯಾಲತಾ ಆನಂದ್, ಸತೀಶ್ ಚಂದ್ರ ಮೂಳೂರು, ಶ್ರೀಕರ್ ಅಂಚನ್, ಮಹೇಶ್ ಪೂಜಾರಿ ಕಟಪಾಡಿ, ಕೆ.ಎಚ್. ಉಸ್ಮಾನ್, ಹಮೀದ್ ಯೂಸುಫ್, ಶೇಖರ್ ಹೆಜಮಾಡಿ, ಕೇಶವ ಸಾಲ್ಯಾನ್, ಗಣೇಶ್ ಕೋಟ್ಯಾನ್, ಜ್ಯೋತಿ ಮೆನನ್, ಸುಧೀರ್ ಕರ್ಕೇರ, ಮೊಹಮ್ಮದ್ ನಯಿಮ್, ಯಶವಂತ ಫಲಿಮಾರು, ಗೋಪಾಲ್ ಪೂಜಾರಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಮೀರ್ ಮೊಹಮ್ಮದ್ ನಿರೂಪಿಸಿದರು. ದಿನೇಶ್ ಕೋಟ್ಯಾನ್ ಫಲಿಮಾರು ವಂದಿಸಿದರು.
ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು – Vishwanews24
