ಅಭ್ಯರ್ಥಿಯಾರಾಗುತ್ತಾರೆ ಎಂಬುದು ಮುಖ್ಯವಲ್ಲ ,ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಖ್ಯ :ಶೋಭಾ ಕರಂದ್ಲಾಜೆ – Vishwanews24
ಉಡುಪಿ: ಬಿಜೆಪಿ ಕಾರ್ಯಕರ್ತರಿಂದಲೇ ತೀವ್ರ ವಿರೋಧ ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಕುಂದಾಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿಯಾಗುತ್ತಾರೆ ಮುಖ್ಯವಲ್ಲ, ನರೇಂದ್ರ ಮೋದಿ ಪ್ರಧಾನಿಯಾಗುವುದು ಮುಖ್ಯ ಎಂದು ಹೇಳಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಹೈಕಮಾಂಡ್ ಸ್ಪಷ್ಟಪಡಿಸಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಯಾರೆನ್ನುವುದಕ್ಕಿಂತ ಮೋದಿಯೇ ಅಭ್ಯರ್ಥಿ ಎನ್ನುವ ಅಂಶವನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಆ ಮೂಲಕ ನಮ್ಮ ಅಭ್ಯರ್ಥಿಯನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು. ಅದಕ್ಕಾಗಿ ಮೋದಿಯವರನ್ನೇ ಮುಂದೆ ತರಬೇಕು ಮತ್ತು ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಸ್ಪಷ್ಟಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಜೆ.ಡಿ.ಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಸೂಚನೆ ಸಿಕ್ಕಿದ್ದು ಇದೀಗ ಶೋಭಾ ಕರಂದ್ಲಾಜೆ ಬಿಜೆಪಿಯ ಅಭ್ಯರ್ಥಿಯಾದರೆ ಸ್ವಲ್ಪ ಮಟ್ಟಿನ ಪೈಪೋಟಿ ನಿರೀಕ್ಷಿಸಲಾಗಿದೆ.
