ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಐತಿಹಾಸಿಕ ದಿನ ಉಡುಪಿಯಲ್ಲಿ ಬೆಳಕಿನ ರಾಮೋತ್ಸವ ಆಚರಿಸೋಣ : ಯಶ್ ಪಾಲ್ ಸುವರ್ಣ – vishwanews24
ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಐತಿಹಾಸಿಕ ದಿನ ಉಡುಪಿಯಲ್ಲಿ ಬೆಳಕಿನ ರಾಮೋತ್ಸವ ಆಚರಿಸೋಣ : ಯಶ್ ಪಾಲ್ ಸುವರ್ಣ
ಜನವರಿ 22 ರಂದು ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಹಾಲು ಪಾಯಸ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸಮಸ್ತ ಹಿಂದೂಗಳ ಬಹು ಶತಮಾನದ ಕನಸು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಉಡುಪಿಯ ಜನತೆ ತಮ್ಮ ಮನೆ, ಕಚೇರಿ, ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ರಾಮ ಜ್ಯೋತಿಯನ್ನು ಬೆಳಗುವ ಮೂಲಕ ಪೊಡವಿಗೊಡೆಯ ಕೃಷ್ಣನ ನಾಡಿನಿಂದ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ವಿಶ್ವಸ್ಥರಾಗಿರುವ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥರ ಆಶಯದಂತೆ ದೇಶಕ್ಕೆ ಹೊಸ ಸಂದೇಶ ಸಾರುವಂತೆ ಉಡುಪಿಯ ಜನತೆಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಜನವರಿ 14 ಮಕರ ಸಂಕ್ರಾತಿಯ ಶುಭ ದಿನದಿಂದ ಆರಂಭಗೊಂಡು, ಜನವರಿ 18 ರಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವ ಹಾಗೂ ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಪ್ರಯುಕ್ತ ಜನವರಿ 25 ರವೆರೆಗೆ 10 ದಿನಗಳ ಕಾಲ ದೀಪಾಲಂಕಾರ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಜನವರಿ 22 ರಂದು ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಹಾಲು ಪಾಯಸ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ
ಜನವರಿ 22 ರಂದು ರಾಮ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ವತಿಯಿಂದ ಭಕ್ತಾದಿಗಳಿಗೆ ವಿಶೇಷ ಹಾಲು ಪಾಯಸ ಸೇವೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಿಧ ತಂಡಗಳ ಕುಣಿತ ಭಜನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದ್ದಾರೆ.
