ಅರಬ್ಬೀ ಸಮುದ್ರದ ನೀರಿನ ಬಣ್ಣ ಬದಲು- ಸ್ಥಳೀಯರಲ್ಲಿ ಆತಂಕ

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಮೆಕ್ನೂ ಚಂಡಮಾರುತ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಸಮುದ್ರದ ನೀರು ಬಣ್ಣ ಬದಲಾಯಿಸಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಗಲ್ಫ್ ರಾಷ್ಟ್ರಗಳನ್ನು ಬೆಚ್ಚಿಬೀಳಿಸಿರುವ ಚಂಡಮಾರುತ, ಈಗ ಕರ್ನಾಟಕ ಕರಾವಳಿಯನ್ನು ನಡುಗಿಸುತ್ತಿದೆ. ಕಡಲ ಅಬ್ಬರ ತೀರದಿಂದ ಅರ್ಧ ಕಿ.ಮೀ ದೂರದಿಂದಲೇ ಮೇಲೇರಿ ಬರುತ್ತಿದೆ. ಕಡಲಿನ ಅಬ್ಬರ ಕಂಡು ಕರಾವಳಿಗರಲ್ಲಿ ಆತಂಕ ಸೃಷ್ಟಿಯಾಗಿದೆ.