ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ತಡೆ ನೀಡಿದ ದಿಲ್ಲಿ ಹೈಕೋರ್ಟ್ – vishwanews24

Featured, ರಾಷ್ಟ್ರ ನ್ಯೂಸ್

ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ತಡೆ ನೀಡಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಜೂರು ಮಾಡಿರುವ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ತುರ್ತು ಅರ್ಜಿ ಆಲಿಸಿದ ದಿಲ್ಲಿ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್ ರ ಬಿಡುಗಡೆಗೆ ತಡೆ ನೀಡಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಬಾಂಡ್‌ನ ಮೇಲೆ ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಂದು ಈಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಉಡುಪಿ: ಜೂ.22ರಂದು ಬಡಗಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ 12ಲಕ್ಷ ರೂ.ಮೌಲ್ಯದ ಪರಿಕರ ವಿತರಣೆ – vishwanews24

Leave a Reply