ಅರುಣ್ ಜೇಟ್ಲಿ ವಿಧಿವಶ : ನಳಿನ್ ಕುಮಾರ್ ಕಟೀಲ್ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು :ಬೆಂಗಳೂರಿನಲ್ಲಿ ರವಿವಾರ ನಡೆಯಲಿದ್ದ  ನಳಿನ್‌ ಕುಮಾರ್‌ ಕಟೀಲು  ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭ  ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನದಿಂದ ಮುಂದೂಡಲ್ಪಟ್ಟಿದೆ .

ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ಆಯೋಜಿಸಲಾಗಿತ್ತು. ನಳಿನ್‌ ಅವರು ಬಿ.ಎಸ್‌. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದರು.ಕಾರ್ಯಕ್ರಮವನ್ನು ಮುಂದೂಡಿರುವ ಬಗ್ಗೆ ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹಿರಾತು

 

 

ಈ ಹಿನ್ನಲೆಯಲ್ಲಿ ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಮಾಡಬೇಕಾಗಿತ್ತು. ಇಂತಹ ಸಮಾರಂಭವನ್ನು ಶೋಕಾಚರಣೆಯ ಹಿನ್ನಲೆಯಲ್ಲಿ, ರದ್ದು ಪಡಿಸಲಾಗಿದೆ. ಈ ಮೂಲಕ ಕಾರ್ಯಕ್ರಮವನ್ನು ಮುಂದೂಡಿ, ರಾಜ್ಯ ಬಿಜೆಪಿ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಸಮಯವನ್ನು ತಿಳಿಸಲಾಗುತ್ತದೆ ಎಂದು ಹೇಳಿದೆ