ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ – vishwanews24
ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ
22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನನ ಸಮಾಧಿ ಮಾಡಿದಸ್ಥಳಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಭೇಟಿ ನೀಡಿ ಗೌರವ ಸಮರ್ಪಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರುವ ಅರ್ಜುನನ ಅಂತ್ಯಕ್ರಿಯೆ ನಡೆದಿದ್ದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.
ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅರ್ಜುನನ ಅಂತ್ಯಕ್ರಿಯೆಯು ನೆರವೇರಿದ್ದು, ಈ ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳುಹಿಸಿದ್ದರು.
