ಅ.24 ರಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ : ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ , ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ -Vishwanews24
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 24 ರಿಂದ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡದಲ್ಲಿ ಅ. 21ರಿಂದ 23 ರವರೆಗೆ ಅರೆಂಜ್ ಆಲರ್ಟ್ ಘೋಷಿಸಲಾಗಿದ್ದು, ಆ ಬಳಿಕ ಅ.24ರಿಂದ 26 ರವರೆ ರೆಡ್ ಅಲರ್ಟ್ ಘೋಷಿಸಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತ ಕ್ರಮ ವಹಿಸುವ ಸಲುವಾಗಿ ಈ ಕೆಳಗಿನಂತೆ ಸೂಚನೆಗಳನ್ನು ನೀಡಿರುತ್ತದೆ.
ಸಾರ್ವಜನಿಕರು/ ಮೀನುಗಾರರು / ನದಿ ತೀರ / ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ತಗ್ಗು ಪ್ರದೇಶ/ ಕೆರೆ/ ನದಿ ತೀರ/ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸುವಂತೆ ಹಾಗೂ ತುರ್ತು ಸೇವೆಗೆ ಟೋಲ್ ಫ್ರೀ ನಂ: 1077, ದೂರವಾಣಿ ಸಂಖ್ಯೆ: 0820-2574802 / 2574360 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
