ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ : ಡಿಸಿಎಂ – Vishwanews24

Featured, ರಾಜ್ಯ ನ್ಯೂಸ್

ಆ. 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ : ಡಿಸಿಎಂ

ಮೈಸೂರು: ಇದೇ ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ ಸಿಗಲಿದೆ.

ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿಂದು ಮೈಸೂರಿಗೆ  ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲ್ಯಾನ್‌ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ  ಮಾಡುವ ಪ್ಲ್ಯಾನ್‌ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪಡುಬಿದ್ರಿ: ಪೆಟ್ರೋಲ್‌ ಬಂಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ; ನಾಲ್ವರ ಬಂಧನ – Vishwanews24

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ  ಆಗುವ ಕಾರಣದಿಂದಾಗಿ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30 ರಂದು ಒಂದು ಬಟನ್ ಒತ್ತಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್‌ಗಳು ಫಲಾನುಭವಿಗಳ ಮೊಬೈಲ್ ನಂಬರ್‌ಗಳಿಗೆ ಬರುತ್ತದೆ. ಎಲ್ಲಾ ಹಣವನ್ನ ಬ್ಯಾಂಕ್‌ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆಯಾದ್ರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಅಂತಲೂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಸರ್ಕಾರದ ಕಾರ್ಯಕ್ರಮ. ವಿರೋಧ ಪಕ್ಷದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿ. 2 ಸಾವಿರ ಬಸ್‌ಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಭಾಗದಿಂದ ಫಲಾನುಭವಿಗಳನ್ನ ಕರೆಸುತ್ತೇವೆ ಅಂತಾ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೈಂದೂರು : ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಚಾಟನೆ – Vishwanews24

Leave a Reply