ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಬಗ್ಗೆ ಕ್ರಮ : ಖಾದರ್ – vishwanews24
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ..
ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು : ಯು.ಟಿ ಖಾದರ್
ಬೆಂಗಳೂರು : ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ತರಕಾರಿ ತಾಜಾ ಕಾಣಬೇಕು ಅಂತ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ, ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇತ್ತೀಚೆಗೆ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿಯ ಕುರಿತು ಮಾತನಾಡಿ, ಮುಂದಿನ ವಾರ ಅಥವಾ 15 ದಿನದಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರ ಜೊತೆ ಸಭೆ ಮಾಡಲಿದ್ದೇವೆ. ಹೋಟೆಲ್‌ಗಳ ಪರಿಶೀಲನೆ ವೇಳೆ ಅನೇಕ ಲೋಪದೋಷ ಕಂಡುಬಂದಿದೆ. ಕ್ಲಬ್‌ನವರು ಹೋಟೆಲ್ ನವರು ಯಾವ ರೀತಿ ಆಹಾರ ತಯಾರಿಕೆ ಸುರಕ್ಷತೆ ಹಾಗೂ ಟ್ರೈನಿಂಗ್ ನೀಡುವ ಬಗ್ಗೆ ಯೋಜನೆ ರೂಪಿಸಿದ್ದೇವೆ. ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಕೂಡ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24
