ಆರ್ಯನ್ ಖಾನ್ ಡ್ರಗ್ಸ್ ಕೇಸ್‌ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್‍ ಹೃದಯಾಘಾತದಿಂದ ನಿಧನ – Vishwanews24

Featured, ರಾಷ್ಟ್ರ ನ್ಯೂಸ್

ಆರ್ಯನ್ ಖಾನ್ ಡ್ರಗ್ಸ್ ಕೇಸ್‌ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್‍ ಹೃದಯಾಘಾತದಿಂದ ನಿಧನ – Vishwanews24

ಮುಂಬೈ: ಬಾಲಿವುಡ್​ನಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಕಾರ್ಡೆಲಿಯಾ ಕ್ರೂಸ್ ಡ್ರಗ್ ಪ್ರಕರಣದಲ್ಲಿ ಎನ್‌ಸಿಬಿಯ ಪಂಚ ಸಾಕ್ಷಿಯಾಗಿದ್ದ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಚೆಂಬೂರಿನ ಮಹುಲ್‌ನಲ್ಲಿರುವ ತಮ್ಮ ನಿವಾಸದಲ್ಲಿಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಶಂಕಿಸಲಾಗಿದೆ.

2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು. ಪ್ರಕರಣದ ವೇಳೆ ಪ್ರಭಾಕರ್​ ಸೈಲ್​ ಕೂಡಾ ಬೆಳಕಿಗೆ ಬಂದಿದ್ದರು.ಪ್ರಭಾಕರ್ ಸೈಲ್ ಅವರು ಡ್ರಗ್ಸ್‌ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕರಾಗಿದ್ದರು. ಪ್ರಭಾಕರ್ ಸೈಲ್ ಅವರು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವಿರುದ್ಧ ಸುಲಿಗೆ ಆರೋಪ ಮಾಡಿದ್ದರು.

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಪಡೆಯಲು ಒಪ್ಪಿಗೆ ನೀಡಿದ  ಸರ್ಕಾರ – Vishwanews24

ಎನ್‌ಸಿಬಿ ದಾಳಿ ನಡೆಸಿದ ಸ್ಥಳದಲ್ಲಿ ಮತ್ತು ಎನ್‌ಸಿಬಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದ ಗೋಸಾವಿ, ಶಾರುಕ್‌ ಪುತ್ರ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಫೋಟೊ ಮತ್ತು ವಿಡಿಯೊ ತೆಗೆದಿದ್ದರು. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ತಾನು ಸ್ವತಂತ್ರ ತನಿಖಾಧಿಕಾರಿ ಎಂದು ಗೋಸಾವಿ ಹೇಳಿಕೊಂಡಿದ್ದರು. ಆದರೆ, ಎನ್‌ಸಿಬಿ ಅವರನ್ನು ಡ್ರಗ್ಸ್‌ ಪ್ರಕರಣದಲ್ಲಿ ‘ಸ್ವತಂತ್ರ ಸಾಕ್ಷಿ’ ಎಂದು ಘೋಷಿಸಿತ್ತು.ಆರ್ಯನ್‌ ಖಾನ್‌ ಬಿಡುಗಡೆಗೆ ಎನ್‌ಸಿಬಿಯ ಅಧಿಕಾರಿಯೊಬ್ಬರು ಮತ್ತು ಕೆ.ಪಿ.ಗೋಸಾವಿ ಸಹಿತ ಇತರ ವ್ಯಕ್ತಿಗಳು ₹25 ಕೋಟಿ ಲಂಚ ಕೇಳಿದ್ದರು. ಇದರಲ್ಲಿ ₹8 ಕೋಟಿ ಹಣವನ್ನು ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ನೀಡಬೇಕೆಂದು ಗೋಸಾವಿ ಹೇಳಿದ್ದಾಗಿ ಪ್ರಭಾಕರ್ ಸೈಲ್ ಆರೋಪಿಸಿದ್ದರು.

ಉಡುಪಿ: ಮುಸ್ಲಿಂ ಅಂಗಡಿಗಳ ಹೆಸರು ಬದಲಿಸುವಂತೆ ಆಗ್ರಹ – Vishwanews24

Leave a Reply