ಆರ್.ಎನ್.ಎಸ್ ಸಮೂಹ ಸಂಸ್ಥೆಗಳ ಸ್ಥಾಪಕ ಆರ್.ಎನ್. ಶೆಟ್ಟಿ ನಿಧನ : ಸಿ. ಎಂ. ಸಂತಾಪ -Vishwanews24
ಆರ್.ಎನ್.ಎಸ್ ಸಮೂಹ ಸಂಸ್ಥೆಗಳ ಸ್ಥಾಪಕ ಆರ್.ಎನ್. ಶೆಟ್ಟಿ ನಿಧನ : ಸಿ. ಎಂ. ಸಂತಾಪ -Vishwanews24
ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928ರ ಆಗಸ್ಟ್ 15ರಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ಅನೇಕ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.
ಇನ್ನು ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ, ಮರಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮಾಡಿ ಶೋಕ ಸಂದೇಶ ತಿಳಿಸಿದ್ದಾರೆ.
ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) December 17, 2020
