ಆರ್. ಧ್ರುವನಾರಾಯಣ ನಿಧನ : ರಾಮನಗರದಲ್ಲಿ ಇಂದು ನಡೆಯಬೇಕಿದ್ದ ಕಾಂಗ್ರೆಸ್ ನ `ಪ್ರಜಾಧ್ವನಿ ಯಾತ್ರೆ’ ರದ್ದು – Vishwanews24
ಆರ್. ಧ್ರುವನಾರಾಯಣ ನಿಧನ : ರಾಮನಗರದಲ್ಲಿ ಇಂದು ನಡೆಯಬೇಕಿದ್ದ ಕಾಂಗ್ರೆಸ್ ನ `ಪ್ರಜಾಧ್ವನಿ ಯಾತ್ರೆ’ ರದ್ದು
ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ.
ಇಂದು ಮುಂಜಾನೆ ಮೈಸೂರಿನಲ್ಲಿ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ನಿಧನ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಇಂದು ನಡೆಯಬೇಕಿದ್ದ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ಕೂಡ ರದ್ದು ಮಾಡಲಾಗಿದೆ.
ರಾಜ್ಯದ ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ.: ಸಿಎಂ ಘೋಷಣೆ – Vishwanews24
ಇಂದು ಬೆಳಗ್ಗೆ ಆರ್. ಧ್ರುವನಾರಾಯಣ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ತಮ್ಮ ಕಾರು ಚಾಲಕನಿಗೆ ಕರೆ ಮಾಡಿ ಆಸ್ಪತ್ರೆಗೆ ಹೋಗುತ್ತಿರುವಾಗ ಮಾರ್ಗಮಧ್ಯದಲ್ಲೇ 6.40 ರ ಸುಮಾರಿಗೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
