ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ, ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ, ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ -Vishwanews24

ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ, ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

52 ವರ್ಷದ ಶೇನ್ ವಾರ್ನ್  ಹೃದಯಾಘಾತವಾಗುತ್ತಿದ್ದಂತೆ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಫಲ ನೀಡದೆ, ವಾರ್ನ್ ಕೊನೆಯುಸಿರೆಳೆದಿದ್ದಾರೆ.

ಆಸ್ಟ್ರೇಲಿಯಾದ ತಂಡದಲ್ಲಿ ಗೂಗ್ಲಿ ಎಸೆತದ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ವಾರ್ನ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಹಲವು ತಂಡಗಳಿಗೆ ಕೋಚ್ ಮತ್ತು ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.

 

 

Leave a Reply