ಇಂದಿರಾ ಕ್ಯಾಂಟೀನ್ ಮುಚ್ಚುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು : ಮುಖ್ಯಮಂತ್ರಿ -Vishwanews24
ಬೆಂಗಳೂರು: ಇಂದಿರಾ ಕ್ಯಾಂಟೀನ್ ಮುಚ್ಚುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಯತ್ನ ನಡೆಸಿದರೆ, ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬುಧವಾರ ಪ್ರತಿಕ್ರಿಯೆ ನೀಡಿದರು.
ಕ್ಯಾಂಟೀನ್‌ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವ ಆರೋಪ ಬಂದಿರುವುದರಿಂದ ತನಿಖೆಗೆ ಸೂಚಿಸಲಾಗಿದೆ. ಆದರೆ, ಕ್ಯಾಂಟಿನ್ ಮುಚ್ಚುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
‘ಇಂದಿರಾ ಕ್ಯಾಂಟೀನ್‌ಗೆ ಅನುದಾನ ತಡೆ ಹಿಡಿಯಲಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಮ್ಮ ಸರ್ಕಾರ ಅನುದಾನ ತಡೆ ಹಿಡಿಯುವ ಕೆಲಸವನ್ನೂ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಚಿಂತನೆಯೂ ಇಲ್ಲ’ ಎಂದೂ ಯಡಿಯೂರಪ್ಪ ಹೇಳಿದರು.
