ಇಂದು ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭ : ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ – Vishwanews24

Featured, ರಾಜ್ಯ ನ್ಯೂಸ್

ಇಂದು ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭ : ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ

ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು, ಕೆಪಿಸಿಸಿ ಅಧ್ಯಕ್ಷ, ನೂತನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಿದ್ದಾರೆ.

ಇನ್ನು ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಹ ಬೆಂಗಳೂರಿಗೆ ಆಗಮಿಸಿದ್ದು, ಬಳಿಕ ರಾಜ್ಯದ ನೂತನ ಸಿಎಂ, ಡಿಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು – ಆರೋಪಿಗಳ ವಿರುದ್ಧ ಪೋಲೀಸ್ ಠಾಣೆಗೆ ದೂರು – Vishwanews24

Leave a Reply