ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: CM ಡಿ.ಕೆ. ಶಿ ಸ್ಪಷ್ಟನೆ – vishwanews24
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ
ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು, ಕಾಂಗ್ರೆಸ್ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
‘ರಾಷ್ಟ್ರೀಯ ಮಾಧ್ಯಮವೊಂದರ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮವೊಂದರಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲ ಆರು ಚರಣಗಳನ್ನು ಹಾಡಿರುವುದನ್ನು ಪ್ರಸ್ತಾಪಿಸಿದಾಗ, ಈ ನಿರ್ಧಾರ ತಮ್ಮ ಗಮನಕ್ಕೆ ಬಾರದೆ ನಡೆದಿರಬಹುದು ಎಂದು ಹೇಳಿದ್ದಾರೆ.
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24
‘ನಾನು ನನ್ನ ಪಕ್ಷದ ಸಿದ್ಧಾಂತವನ್ನು ನಂಬುತ್ತೇನೆ. ನಾವು ಏನು ನಿರ್ಧರಿಸಿದ್ದೇವೆಯೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನನ್ನ ಗಮನಕ್ಕೆ ಬಾರದೆ ಅಥವಾ ರಾಜ್ಯಪಾಲರ ಭವನದಲ್ಲಿ ಇದು ನಡೆದಿರಬಹುದು. ಆದರೆ, ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಾವು ಈ ಹಿಂದೆ ನಿರ್ಧರಿಸಿದಂತೆ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುತ್ತೇವೆ’ ಎಂದು ಹೇಳಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) 1937ರಲ್ಲಿ ಕೈಗೊಂಡಿದ್ದ ನಿರ್ಣಯವನ್ನು ಪುನರುಚ್ಚರಿಸಿತ್ತು. ಸಾರ್ವಜನಿಕ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಅಂದಿನ ನಿರ್ಣಯದಲ್ಲಿ ಹೇಳಲಾಗಿತ್ತು.
ಎಲ್ಲ ಚರಣಗಳನ್ನೂ ಹಾಡುವುದನ್ನು ಕಡ್ಡಾಯಗೊಳಿಸುವ ಹೊಸ ‘ವಂದೇ ಮಾತರಂ’ ಮಸೂದೆ ಜಾರಿಗೆ ಬಂದಿರುವ ಬೆನ್ನಲ್ಲೇ CWC ಈ ನಿರ್ಧಾರ ಕೈಗೊಂಡಿತ್ತು. ‘ವಂದೇ ಮಾತರಂ’ ಗೀತೆಯ ಗಾಯನ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ರಾಜಕೀಯ ವಾಕ್ಸಮರವೂ ನಡೆಯುತ್ತಿದೆ.\
