ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ – vishwanews24

Featured, ರಾಜ್ಯ ನ್ಯೂಸ್

ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಬೆಳ್ತಂಗಡಿ:  ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದ ಬಾಲಕ ಮೃತ್ಯು – vishwanews24

ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು. ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು‌ ಕೇಳಿದ್ದೆನೆ. ‌ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳ್ತಂಗಡಿ:  ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದ ಬಾಲಕ ಮೃತ್ಯು – vishwanews24

Leave a Reply