ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24
ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್
ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.
ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24
ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24
ಕಾನ್ಸ್ಟೇಬಲ್ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
