ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ, ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ : ಓವೈಸಿ – Vishwanews24
ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ, ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ : ಓವೈಸಿ
ಹೈದರಾಬಾದ್: ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ನಡೆಸುವುದಕ್ಕೆ ಕೋರ್ಟ್ ಅನುಮತಿ ನೀಡಿರುವ ಕುರಿತು ಮಾತನಾಡಿ, ನ್ಯಾಯಾಲಯದ ಆದೇಶವು ಪೂಜಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಇದು ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಬಹುದು ಎಂದು ತಿಳಿಸಿದ್ದಾರೆ.
1947, ಆಗಸ್ಟ್ 15ರ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು 1991ರ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ. ಈ ಕಾಯ್ದೆಯಡಿ ಯೋಗಿ ಸರ್ಕಾರವು ಈ ಜನರ ವಿರುದ್ಧ ತಕ್ಷಣವೇ ಎಫ್ಐಆರ್ ಅನ್ನು ದಾಖಲಿಸಬೇಕು. ನ್ಯಾಯಾಲಯದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಓವೈಸಿ ತಿಳಿಸಿದ್ದಾರೆ.
