ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎಗೆ ಬಹುಮತ ದೊರೆಯುತ್ತದೆ : ರಾಜನಾಥ್ ಸಿಂಗ್ -Vishwanews24
ವಾರಾಣಾಸಿ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎಗೆ ಬಹುಮತ ದೊರೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಸಿದ್ದ ರಾಜನಾಥ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೂಡ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಬಹುಮತ ದೊರೆಯುತ್ತದೆ ಎಂದರು.
ಈ ವೇಳೆ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಾರಣಾಸಿಯ ಜನತೆ ಪ್ರಧಾನಿಯನ್ನು ಆಯ್ಕೆ ಮಾಡುವ ಅದೃಷ್ಟ ಹೊಂದಿದ್ದಾರೆ. ಅದೇ ದೇಶದ ಇತರೆ ಮತದಾರರು ಕೇವಲ ಸಂಸತ್ ಸದಸ್ಯರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
