ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ : ಸಿದ್ದರಾಮಯ್ಯ  – Vishwanews24

Featured, ರಾಜ್ಯ ನ್ಯೂಸ್

ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ , ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ  : ಸಿದ್ದರಾಮಯ್ಯ 

ಮೈಸೂರು: ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ ಹಾಗಾಗಿ ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿಗೆ ಭೇಟಿ ನೀಡಿ ಮಾತನಾಡಿದ ಅವರು ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳುತಿದ್ದಾರೆ ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವರ್ಷ ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿರಿ ನನಗೆ ಮಾತ್ರ ಗೊತ್ತಿರುತ್ತೆ‌, ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಹೇಳಿದರು.

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ – Vishwanews24

 

Leave a Reply