ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ತರಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ : ಸಿಎಂ ಬೊಮ್ಮಾಯಿ – Vishwanews24
ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ತರಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ : ಸಿಎಂ ಬೊಮ್ಮಾಯಿ – Vishwanews24
ಬೆಂಗಳೂರು : ಉಕ್ರೇನ್ ನಲ್ಲಿ ಸಾವನ್ನಪ್ಪಿದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ನವೀನ್ ಮೃತದೇಹವನ್ನು ತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
ಮೃತದೇಹವನ್ನು ಪಡೆಯುವ ಕುರಿತಂತೆ ನಿಖರ ಮಾಹಿತಿಯನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಗೆ ಭೇಟಿ ನೀಡಿ ಮೃತಪಟ್ಟ ನವೀನ್ ಅವರ ತಂದೆಗೆ ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಉಕ್ರೇನ್ : 629 ಭಾರತೀಯರನ್ನು ಸ್ವದೇಶಕ್ಕೆ ಕರೆತಂದ ವಾಯುಪಡೆಯ 3 ಐಎಎಫ್ ವಿಮಾನಗಳು – Vishwanews24
