ಉಕ್ರೇನ್‌ : ಹೆಲಿಕಾಪ್ಟರ್ ಪತನ- ಆಂತರಿಕ ಸಚಿವ ಸೇರಿ 16 ಮಂದಿ ಸಾವು  – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಕೈವ್‌ : ಹೆಲಿಕಾಪ್ಟರ್ ಪತನ- ಉಕ್ರೇನ್‌ನ ಆಂತರಿಕ ಸಚಿವ ಸೇರಿ 16 ಮಂದಿ ಸಾವು 

ಕೈವ್‌: ಉಕ್ರೇನ್‌ನ ರಾಜಧಾನಿ ಕೈವ್‌ ಹೊರಗಿನ ಶಿಶುವಿಹಾರದ ಬಳಿ ಇಂದು ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಗವರ್ನರ್ ತಿಳಿಸಿದ್ದಾರೆ.

ಸತ್ತವರಲ್ಲಿ ಉಕ್ರೇನ್‌ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್ಸ್ಕಿ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಕಳ : ನಿಟ್ಟೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ಎನ್.ಎಚ್.ಅಬ್ದುಲ್ ಹಮೀದ್ ಆಯ್ಕೆ – Vishwanews24

ಬ್ರೋವರಿ ನಗರದಲ್ಲಿ, ಶಿಶುವಿಹಾರ ಮತ್ತು ವಸತಿ ಕಟ್ಟಡದ ಬಳಿ ಹೆಲಿಕಾಪ್ಟರ್ ಬಿದ್ದಿದೆ ಎಂದು ಕೈವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಒಲೆಕ್ಸಿ ಕುಲೆಬಾ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ದುರಂತದ ಸಮಯದಲ್ಲಿ, ಮಕ್ಕಳು ಮತ್ತು ಉದ್ಯೋಗಿಗಳು ಶಿಶುವಿಹಾರದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply