ಉಚ್ಚಿಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು -Vishwanews24

Featured, ಉಡುಪಿ

ಪಡುಬಿದ್ರಿ: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಯಾಣಿ ಹೋಟೆಲ್ ಎದುರು ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮೂರು ತುಂಡಾಗಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅದೃಷ್ಟವಶಾತ್ ಇಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.