ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ :-ಸಹಕಾರ ರತ್ನ ಡಾ ಎಂ‌ಎನ್ ರಾಜೇಂದ್ರ ಕುಮಾರ್ ಅವರಿಗೆ ಗೌರವದ ಅಭಿನಂದನೆ :Vishwanews24

Featured, ಉಡುಪಿ

ರಾಜ್ಯ ಮಟ್ಟದ ಸಹಕಾರಿ ಸಪ್ತಾಹಕ್ಕೆ ಕೇಂದ್ರ ಸಚಿವ ಅಮಿತ್ ಶಾ ಗೆ ಆಹ್ವಾನ : ಯಶ್ಪಾಲ್ ಸುವರ್ಣ

ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇವರ ಆಶ್ರಯದಲ್ಲಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಸಹಕಾರ‌ ಮಾರಾಟ ಮಹಾ ಮಂಡಳದ ಎರಡನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾದ ಸಹಕಾರ ರತ್ನ ಡಾ ಎಂ‌ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನ ಕಾರ್ಯಕ್ರಮ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು.

ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ‌ ಮಾರಾಟ ಮಹಾ ಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಬೆಳಪು ದೇವಿಪ್ರಸಾದ್ ಅವರಿಗೂ ಸನ್ಮಾನಿಸಲಾಯಿತು.

ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟನೆ ಯನ್ನು ನೆರವೇರಿಸಿದರು.
ನಾಡೋಜ ಡಾ ಜಿ ಶಂಕರ್, ಜಯ ಸಿ ಕೋಟ್ಯಾನ್,ಮಟ್ಟಾರ್ ರತ್ನಾಕರ ಹೆಗ್ಡೆ,ಬೆಳಪು ದೇವಿಪ್ರಸಾದ್ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಅಪ್ಪಿ ಸಾಲಿಯಾನ್ ,ಮೊದಲಾದವರು ಉಪಸ್ಥಿತರಿದ್ದರು.

ಮಹಾಲಕ್ಷ್ಮಿ ಕೋ‌ ಆಪರೇಟಿವ್ ಬ್ಯಾಂಕಿನ‌ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿ ಪ್ರಸ್ತಾವಿಸಿದರು, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ,ಜಗದೀಶ ಮೊಗವೀರ ವಂದಿಸಿದರು.

Leave a Reply