ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24
ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24
ಉಡುಪಿ : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 9:30ಕ್ಕೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿತು.
ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ ನಮನ ಸಲ್ಲಿಸಿದರು.
ಬಳಿಕ ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಚಚ್೯ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಲಾಗಿದೆ.
ಬ್ಲೋಸಂ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೊಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು
ತದನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಉಡುಪಿ ಕಾಂಗ್ರೆಸ್ ಭವನ ದಲ್ಲಿ ಇರಿಸಲಾಗುವುದು.
