ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ
ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ
ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಡುಪಿ ತಾಲೂಕಿನ 76 ಬಡಗಬೆಟ್ಟು, ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆ.13ರಂದು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಇಕ್ವಾಲ್ ಶೇಖ್‌ನನ್ನು ಬಂಧಿಸಲಾಗಿದೆ.
ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24
ಬಂಧಿತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಐದು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24
ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಇಕ್ವಾಲ್ ಶೇಖ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
