ಉಡುಪಿ:ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ- ಸುಮೊಟೊ ಕೇಸು ದಾಖಲಿಸಲು ಶಾಸಕ ಯಶ್ ಪಾಲ್ ಆಗ್ರಹ – Vishwanews24

Featured, ಉಡುಪಿ

ಉಡುಪಿ:ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ- ಸುಮೊಟೊ ಕೇಸು ದಾಖಲಿಸಲು ಶಾಸಕ ಯಶ್ ಪಾಲ್ ಆಗ್ರಹ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.

ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ. ಮೂವರು ಹುಡುಗಿಯರ ವರ್ತನೆಯಿಂದ ಜಿಲ್ಲೆ ತಲೆತಗ್ಗಿಸುವಂತಾಗಿದೆ.

ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ – ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ :ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ.. vishwanews24

ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇರಿಸಿದ ಕ್ರಮ ಸರಿಯಲ್ಲ. ಇದು ಬ್ಲಾಕ್‌ ಮೇಲ್‌ ತಂತ್ರ. ಈ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಗಮನಕ್ಕೆ ತರುತ್ತೇನೆ.

ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ. ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ.

ವಿಡಿಯೋ ಕ್ಲಿಪಿಂಗ್ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸೂಕ್ತ ಕ್ರಮ ಜರುಗಿಸ ಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.

ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಪೊಲೀಸರು ಆಕೆಯ ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ.

ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.

ಉಡುಪಿ: ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ – ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ :ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ.. vishwanews24

Leave a Reply