ಉಡುಪಿ : ಅಂಬಲಪಾಡಿ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಕಾರು ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24

Featured, ಉಡುಪಿ

ಅಂಬಲಪಾಡಿ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಕಾರು ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ವೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ.

ಪಡುಬಿದ್ರಿ: ಕಾರು ಢಿಕ್ಕಿ ಹೊಡೆದು ಪಾದಚಾರಿ ಸಾವು – vishwanews24

Leave a Reply