ಉಡುಪಿ: ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಉಡುಪಿ ಜಿಲ್ಲಾಧಿಕಾರಿಗೆ ಮನವಿ – Vishwanews24
ಉಡುಪಿ: ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಉಡುಪಿ ಜಿಲ್ಲಾಧಿಕಾರಿಗೆ ಮನವಿ – Vishwanews24
ಉಡುಪಿ: ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆ ಯ ಸರ್ವ ಸದಸ್ಯರು
ಉಡುಪಿಯ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು.
ಈ ಒಂದು ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುತ್ತು ಸಂದರ್ಭದಲ್ಲಿ ಯಾವುದೇ ಪರಿಹಾರ ಒದಗಿಸಿಲ್ಲ ಎರಡು ವರ್ಷದಿಂದ ಸರಿಯಾಗಿ ಯಾವುದೇ ಪೂಜೆ ಪುರಸ್ಕಾರ ವಾರ್ಷಿಕ ನೇಮೋತ್ಸವ ಗಳು ಯಾವುದೇ ಇತರ ಕಾರ್ಯಗಳು ನಡೆಯಲಿಲ್ಲ. ಈ ಒಂದು ಸಂದರ್ಭದಲ್ಲಿ ಸರ್ಕಾರ ಸಂಪೂರ್ಣ ನಿಷೇಧಿಸಿದೆ. ಸುಮಾರು ಉಡುಪಿ ಮಂಗಳೂರಿನಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ದೈವ ಚಾಕ್ರಿ ವರ್ಗದವರಿದ್ದಾರೆ.
ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಇವರಿಗೆ ಜೀವನ ನಡೆಸಲು ತುಂಬಾ ಸಂಕಷ್ಟಗಳು ಎದುರಿಸುತ್ತಿದ್ದಾರೆ.
ಇಂಥ ಸಂದರ್ಭದಲ್ಲಿ ಇವರಿಗೆ ಯಾವುದೇ ಸಂಪಾದನೆ ಇಲ್ಲ ದೈವಾರಾಧನೆ ಮೂಲ ಕುಲಕಸುಬಾಗಿ ಅವಲಂಬಿಸಿದ್ದಾರೆ ಇದರಿಂದ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನೀಗಿಸಬೇಕಾಗಿದೆ.
ಲಾಕ್ ಡೌನ್ ತೆಗೆದ ನಂತರ ಮುಂದಿನ ದಿನಗಳಲ್ಲಿ 200 ಜನರ ಸೀಮಿತ ಅವಧಿಗೆ ಸರ್ಕಾರ ದ ಕಟ್ಟುನಿಟ್ಟಾದ ನಿಯಮ ಅನುಸಾರವಾಗಿ ದೈವಾರಾಧನೆಗೆ ಅನುಮತಿ ನೀಡಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇವೆ ಎಂದು ಒಕ್ಕೂಟದ ಸರ್ವ ಸದಸ್ಯರು ಡಿಸಿ ಅವರಿಗೆ ವಿನಂತಿ ಮಾಡಿಕೊಂಡರು.
ಮನವಿಯನ್ನು ಪಡೆದುಕೊಂಡು ಡಿಸಿಯವರು ಈ ದಿನವೇ ಮುಖ್ಯಮಂತ್ರಿಗಳಿಗೆ ನಿಮ್ಮ ಬೇಡಿಕೆಗಳ ಮನವಿಯನ್ನು ಕಳುಹಿಸಿಕೊಡುತ್ತೇನೆ ಎಂದು ಜಿ ಜಗದೀಶ್ ಅವರು ಸರ್ವ ಸದಸ್ಯರಿಗೆ ಸ್ಪಂದಿಸಿದರು.
ಈ ಒಂದು ಸಂದರ್ಭದಲ್ಲಿ ಅಧ್ಯಕ್ಷರಾದ ರವಿ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ಕೋಶಧಿಕಾರಿ ಯಾದ ಶ್ರೀಧರ್ ಪೂಜಾರಿ ಜೊತೆಗೆ ಕಾರ್ಯದರ್ಶಿಯಾದ ರವೀಶ್ ಕಾಮತ್ ಹಾಗೂ ಹಾಗೂ ಗೌರವ ಹಿತೈಷಿಗಳಾದ ನವೀನ್ ಅವರು ಉಪಸ್ಥಿತರಿದ್ದರುು.
