ಉಡುಪಿ : ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ ; ಪೋಕ್ಸೋ ಪ್ರಕರಣ ದಾಖಲು – vishwanews24
ಉಡುಪಿ : ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ ; ಪೋಕ್ಸೋ ಪ್ರಕರಣ ದಾಖಲು
ಉಡುಪಿ : ಲಾಡ್ಜ್ ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದೆ.
ಶ್ರೀಶಾಂತ್ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ. ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದು, ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ನನಗೂ ಶ್ರೀಶಾಂತ್ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.
ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ – vishwanews24
