ಉಡುಪಿಯಲ್ಲಿ ಲಿಕ್ಕರ್ ಸ್ಟಾಕ್ ಇದೆ,ನೂಕುನುಗ್ಗಲು ಮಾಡ್ಬೇಡಿ: ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ: vishwanews24
ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿಉಡುಪಿಯಲ್ಲಿ ಲಿಕ್ಕರ್ ಸ್ಟಾಕ್ ಇದೆ,ನೂಕುನುಗ್ಗಲು ಮಾಡ್ಬೇಡಿ:
ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ
ಉಡುಪಿ: ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಲಭ್ಯವಿದೆ. ಯಾರೂ ನೂಕುನುಗ್ಗಲು ಮಾಡಬೇಡಿ ಅಂತ ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಮದ್ಯ ಮಾರಾಟ ನಡೆಯಲಿದೆ. ಜಿಲ್ಲೆಯ 103 ವೈನ್ ಸ್ಟೋರ್ ಗಳಲ್ಲಿ ಮದ್ಯ ಲಭ್ಯವಿದೆ. ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್‍ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆಯಲಿದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಸ್ಟಾಕ್ ಇದೆ. ಯಾವುದೇ ಒತ್ತಡವಿಲ್ಲದೆ ಬಂದು ಮದ್ಯ ಖರಿದಿಸಿ. ಸಾರ್ವಜನಿಕ ಪ್ರದೇಶದಲ್ಲಿ ಮದ್ಯ ಸೇವನೆಗೆ ಅವಕಾಶ ಇಲ್ಲ. ಖರೀದಿಸಿದ ಮದ್ಯವನ್ನು ಮನೆಗೆ ತೆಗೆದುಕೊಂಡು ಹೋಗಿ ಕುಡಿಯಬೇಕು. ಮದ್ಯ ಮಾರಾಟಗಾರರು ಮತ್ತು ಗ್ರಾಹಕರಿಗೆ ಸಾಮಾಜಿಕ ಅಂತರ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಎಂದರು. ಮದ್ಯದಂಗಡಿಯ ಮುಂದೆ ನೂಕಾಟ -ತಳ್ಳಾಟ ಮಾಡಬೇಡಿ. ಸಮಾಜಿಕ ಅಂತರ ಕಾಪಾಡಿ ಎಂದರು.
