ಉಡುಪಿ : ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಉಡುಪಿ : ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ..
ಎಚ್ಚರಿಕೆಯಿಂದ ಇರಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ..
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಅಗಸ್ಟ್ 3 ಮತ್ತು 4ರಂದು ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ/ಹತ್ತಿರದಲ್ಲಿ ನಿಲ್ಲಬಾರದು. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಉಳ್ಳಾಲ: ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು – Vishwanews24
