ಉಡುಪಿ: ಇಂದು 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 173 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5143 ಕ್ಕೆ ಏರಿಕೆಯಾಗಿದೆ.
ಬುಧವಾರ 1244 ವರದಿಗಳು ನೆಗೆಟಿವ್ ಬಂದಿದ್ದು, 173 ಪಾಸಿಟಿವ್ ಬಂದಿವೆ. 1140 ವರದಿಗಳು ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ ಇದುವರೆಗೂ 3072 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2027 ಸಕ್ರಿಯ ಪ್ರಕರಣಗಳು ಬಾಕಿ ಇವೆ.
