ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ , ಕರಾವಳಿಯಲ್ಲಿ ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ : ಡಿ ಕೆ ಶಿ – Vishwanews24
ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ , ಕರಾವಳಿಯಲ್ಲಿ ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ : ಡಿ ಕೆ ಶಿ
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಕರವಾಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಜನರ ವಿಶ್ವಾಸ ಹೆಚ್ಚಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೈಂದೂರಿನಲ್ಲಿ ಮಾತನಾಡಿದ ಅವರು, ಇನ್ನೂ ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿಯ ಹಲವು ನಾಯಕರುಗಳು ಕಾಂಗ್ರೆಸ್ ಸೇರಿದ್ದಾರೆ. ಜನರ ಈ ವಿಶ್ವಾಸ ಉಳಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ಜನರ ಸೇವೆ ಮಾಡಬೇಕು. ರಾಹುಲ್ ಗಾಂಧಿ ಅವರು ಈ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.
ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ – Vishwanews24
ಇನ್ನೂ ಈ ಭಾಗದಲ್ಲಿ ಬಿಜೆಪಿ ಹಿಂದುತ್ವದ ವಿಚಾರದಲ್ಲಿ ಚುನಾವಣೆ ಮಾಡುತ್ತಿದೆ ಇದು ಫಲ ನೀಡುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಆ ತಂತ್ರ ಫಲ ನೀಡುವುದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ. ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ ಎಂದು ತಿಳಿಸಿದರು.
