ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ – Viswhanews24
ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಡೆಕಾರ್ ಗ್ರಾಮಪಂಚಾಯತ್ ನ 3 ಭಾರಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಕೋಟ್ಯಾನ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಕೇಂದ್ರ ಸರಕಾರ ಕ್ಷೇತ್ರ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ರಾಜ್ಯ ಖಾತೆ ಸಚಿವರಾದ ಬಿ.ಎಲ್ ವರ್ಮಾ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಮಂಗಳೂರು:ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಪದ್ಮರಾಜ್ ನೇಮಕ – Vishwanews24
ಈ ಸಂದರ್ಭದಲ್ಲಿ ಸಂಸದರಾದ ಗೋಪಾಲ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.
