ಉಡುಪಿ ಕಾಲೇಜು ವಿಡಿಯೋ ಪ್ರಕರಣ : ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಗೆ ಜಾಮೀನು – Vishwanews24
ಉಡುಪಿ ಕಾಲೇಜು ವಿಡಿಯೋ ಪ್ರಕರಣ : ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಗೆ ಜಾಮೀನು
ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜಾಮೀನು ಮಂಜೂರಾಗಿದೆ.
ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿನಿಯರು ಓರ್ವ ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಪ್ರಕರಣವನ್ನು ಖಂಡಿಸಿ ಆ. 3 ರಂದು ಉಡುಪಿಯಲ್ಲಿ ವಿಶ್ವ ಹಿಂದೂ ಪರಿಷತ್ – ಬಜರಂಗ ದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ ವೆಲ್ ‘ತಾಯಿಯಂದಿರು ಸೌಟು ಹಿಡಿಯುವ ಕೈಯಲ್ಲಿ ಕತ್ತಿ, ತಲಾವಾರು ಹಿಡಿಯ ಬೇಕು’ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಈ ಪ್ರಕರಣದಲ್ಲಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ಮಣಿಪಾಲ KMC: ಅಪರೂಪದ ಮೂಳೆ ಮಜ್ಜೆ ಕಸಿ ಯಶಸ್ವಿ; ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ – Vishwanews24
