ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ ಉತ್ಸವ – Vishwanews24
ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ
ಉತ್ಸವ
ಉಡುಪಿ: ಕೃಷ್ಣನಗರಿಯಲ್ಲಿ ಇಂದು ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿ ನೆರವೇರುತ್ತಿದ್ದು, ನಾಳೆ ವಿಟ್ಲಪಿಂಡಿ ಉತ್ಸವಕ್ಕೆ ನಡೆಯಲಿದೆ. ಇನ್ನು ಮೊಸರು ಕುಡಿಕೆ ಉತ್ಸವ ನೋಡುವುದಕ್ಕೆಂದೇ ಉಡುಪಿ ಮಾತ್ರವಲ್ಲದೇ ನಾನಾ ಭಾಗಗಳಿಂದ ಸಾವಿರಾರು ಮಂದಿ ಸೇರಿದ್ದಾರೆ. ಕೊರೋನಾ ಕಾರಣದಿಂದ ಎರಡು ವರ್ಷಗಳಲ್ಲಿ ಸರಳವಾಗಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ ಆಚರಿಸಲಾಗಿತ್ತು. ಈ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ.
ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಇಂದು ಬೆಳಗ್ಗೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸಿ ,ಮಹಾಪೂಜೆ ನೆರವೇರಿಸಲಿದ್ದಾರೆ.

19ರಂದು ಮಧ್ಯರಾತ್ರಿ ಶುಭ ಮೂಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. 20ರಂದು ಮಧ್ಯಾಹ್ನ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
ಅಂದು ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ.
