ಉಡುಪಿ : ಕೆ.ಓ.ಎಸ್. ಪರೀಕ್ಷೆ : ನಿಷೇಧಾಜ್ಞೆ ಜಾರಿ – Vishwanews24

Featured, ಉಡುಪಿ

ಉಡುಪಿ : ಕೆ.ಓ.ಎಸ್. ಪರೀಕ್ಷೆ : ನಿಷೇಧಾಜ್ಞೆ ಜಾರಿ – Vishwanews24

ಉಡುಪಿ : ರಾಜ್ಯ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆಗಳು ಜುಲೈ 26 ರಿಂದ ಆಗಸ್ಟ್ 4 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.