ಉಡುಪಿ:  ಗೌಶಾಲೆಗಳ ಅಭಿವೃದ್ಧಿಗೆ CSR ನಿಧಿ ಬಳಕೆಗೆ ಒತ್ತಾಯ: ನಿರ್ಮಲಾ ಸೀತಾರಾಮನ್‌ ಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ – vishwanews24

Featured, ಉಡುಪಿ

ಉಡುಪಿ:  ಗೌಶಾಲೆಗಳ ಅಭಿವೃದ್ಧಿಗೆ CSR ನಿಧಿ ಬಳಕೆಗೆ ಒತ್ತಾಯ: ನಿರ್ಮಲಾ ಸೀತಾರಾಮನ್‌ಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ: ರಾಜ್ಯದ ಗೌಶಾಲೆಗಳ ಅಭಿವೃದ್ಧಿ ಹಾಗೂ ಗೋವುಗಳ ಕಲ್ಯಾಣಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳನ್ನು ಬಳಸಲು ಉತ್ತೇಜನ ನೀಡುವಂತೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

2026ರ ಅಕ್ಟೋಬರ್ 7ರಂದು ಬರೆದಿರುವ ಪತ್ರದಲ್ಲಿ, ಕರ್ನಾಟಕದಲ್ಲಿ 2,000ಕ್ಕೂ ಹೆಚ್ಚು ಗೌಶಾಲೆಗಳಿದ್ದು, ಅವುಗಳಲ್ಲಿ ಅನೇಕ ಗೌಶಾಲೆಗಳು ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಆಶ್ರಯ ನೀಡುತ್ತಿವೆ. ಆದರೆ, ಹಲವಾರು ಗೌಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ಆರ್ಥಿಕ ನೆರವಿನ ಅಗತ್ಯವಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ , ಮಾರಾಟ – vishwanews24

ಕಂಪನಿಗಳ ಕಾಯ್ದೆ, 2013ರ ಅನುಸೂಚಿ VIIರ ಅಡಿಯಲ್ಲಿ ಪರಿಸರ ಸಂರಕ್ಷಣೆ, ಸಸ್ಯ ಮತ್ತು ಪ್ರಾಣಿಗಳ ರಕ್ಷಣೆ ಹಾಗೂ ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ಚಟುವಟಿಕೆಗಳು CSR ನಿಧಿ ಬಳಕೆಗೆ ಅರ್ಹವಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ಸರ್ಕಾರಿ ಕಂಪನಿಗಳು ಹಾಗೂ ಇತರ ಅರ್ಹ ಕಾರ್ಪೊರೇಟ್ ಸಂಸ್ಥೆಗಳು ತಮ್ಮ CSR ಯೋಜನೆಗಳ ಮೂಲಕ ಗೌಶಾಲೆಗಳ ಅಭಿವೃದ್ಧಿಗೆ ನೆರವು ನೀಡುವಂತೆ ಪ್ರೋತ್ಸಾಹಿಸಬೇಕೆಂದು ಅವರು ಕೋರಿದ್ದಾರೆ.

ಗೌಶಾಲೆಗಳಲ್ಲಿ ಜಾನುವಾರುಗಳ ಕೊಟ್ಟಿಗೆಗಳ ನಿರ್ಮಾಣ ಮತ್ತು ನವೀಕರಣ, ಕುಡಿಯುವ ನೀರಿನ ವ್ಯವಸ್ಥೆ, ಮೇವು ಸಂಗ್ರಹಣೆ, ಆಹಾರ ಪೂರೈಕೆ, ಪಶುವೈದ್ಯಕೀಯ ಆರೈಕೆ, ಸ್ವಚ್ಛತೆ, ಒಳಚರಂಡಿ ಹಾಗೂ ತ್ಯಾಜ್ಯ ನಿರ್ವಹಣೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ CSR ನಿಧಿಗಳನ್ನು ಬಳಸಿಕೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸೌಜನ್ಯ ಪ್ರಕರಣ ತನಿಖೆ ನಡೆಸಿದ್ದ ಪೊಲೀಸ್‌ ಅಧಿಕಾರಿಗೆ ಎಸ್‌ಐಟಿ ಬುಲಾವ್‌ – vishwanews24

ಅಲ್ಲದೆ, ಅರ್ಹ ಮತ್ತು ನೈಜವಾಗಿ ಕಾರ್ಯನಿರ್ವಹಿಸುತ್ತಿರುವ ಗೌಶಾಲೆಗಳನ್ನು ಗುರುತಿಸಿ ಅವುಗಳಿಗೆ ನೆರವು ಒದಗಿಸಲು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿರುವ ಗೌಶಾಲೆಗಳಿಗೆ ಆದ್ಯತೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಕ್ರಮಗಳಿಂದ ಗೋವುಗಳ ಕಲ್ಯಾಣಕ್ಕೆ ನೆರವಾಗುವುದರ ಜೊತೆಗೆ ಗ್ರಾಮೀಣ ಜನರ ಜೀವನೋಪಾಯವನ್ನು ಬಲಪಡಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ರದಲ್ಲಿ ತಿಳಿಸಿದ್ದಾರೆ

Leave a Reply