ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಹೊಸ ನೇಮಕಾತಿ ಮಾಡಲಾಗಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ, ಜುನೈದ್ ಡಿ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜುನೈದ್ ಡಿ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯನಿರ್ವಹಿಸುವಂತೆ ಕೋರಲಾಗಿದೆ.
