ಉಡುಪಿ : ಜಿಲ್ಲೆಯಲ್ಲಿ ಇಂದು 103 ಕೊರೋನಾ ಪ್ರಕರಣ -Vishwanews24
ಉಡುಪಿ : ಜಿಲ್ಲೆಯಲ್ಲಿ ಇಂದು 103 ಕೊರೋನಾ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 103 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10236 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯ 50, ಕುಂದಾಪುರದ 19, ಕಾರ್ಕಳದ 26 ಹಾಗೂ ಇತರೆ ಜಿಲ್ಲೆಗಳ 8 ರೋಗಿಗಳು ಇದ್ದಾರೆ.
ಜಿಲ್ಲೆಯಲ್ಲಿ ಸೋಮವಾರ 156 ಮಂದಿ ಗುಣಮುಖರಾಗಿದ್ದು ಇದುವರೆಗೂ 7557 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2590 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 89ಮಂದಿ ಸಾವನಪ್ಪಿದ್ದಾರೆ.
